ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ;ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಏ, 01: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಷಾ ಅವರೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು. ಸಹಕಾರಿ ರಂಗದ ಹಾಲು ಉತ್ಪಾದಕರ ಶಕ್ತಿ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಸುಮಾರು…