ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಮೌನ: ಹೆಚ್.ಡಿ.ಕೆ ಆಕ್ರೋಶ
ಬೆಂಗಳೂರು,ಏ,3: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಮೌನವಾಗಿರುವ ಬಿಜೆಪಿ, ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; “ಮೌನಕ್ಕೆ ಶರಣಾಗಿರುವ ಬಿಜೆಪಿಯನ್ನು ಮೌನಿ ಪಕ್ಷ, ಸರಕಾರವನ್ನು ಮೌನಿ ಸರಕಾರ ಹಾಗೂ ಮುಖ್ಯಮಂತ್ರಿಯನ್ನು ಮೌನಿ ಮುಖ್ಯಮಂತ್ರಿ” ಎಂದು ಛೇಡಿಸಿದ್ದಾರೆ ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ…