Girl in a jacket

Daily Archives: April 7, 2022

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ದಿಡೀರ್ ಬದಲಾವಣೆ

ಬೆಂಗಳೂರು ,ಏ.7: ದ್ವಿತೀಯ ಪಿಯುಸಿ  ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ  ಬದಲಾವಣೆಯಾಗಿದೆ.  ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು. ಕೆಲ‌ ತಾಂತ್ರಿಕ ಕಾರಣಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ. ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು ಬೋರ್ಡ್  ಮಾಹಿತಿ ನೀಡಿದೆ. ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಬದಲಾವಣೆಯನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ತಮ್ಮೆಲ್ಲರ ಗಮನಕ್ಕೆ ಈ ಹಿಂದೆ…

ವರ್ಷದಲ್ಲಿ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ: ಅಶ್ವತ್ಥನಾರಾಯಣ

ಮೈಸೂರು,ಏ,07: ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ವರ್ಷ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ ಕೊಟ್ಟು, ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲಾಗುವುದು. ಜತೆಗೆ, ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮಟ್ಟದಿಂದಲೇ ಉದ್ಯೋಗಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಹೇಳಿದ್ದಾರೆ. ನಿಗಮದ ವತಿಯಿಂದ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ `ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, `ರಾಜ್ಯದಲ್ಲಿ ಉದ್ಯೋಗಗಳಿಗೇನೂ ಕೊರತೆ ಇಲ್ಲ. ಆದರೆ, ಈ ಉದ್ಯೋಗಗಳಿಗೆ ಬೇಕಾದ…

ಉಕ್ರೇನಿಂದ ಸ್ವದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಬಿಎಲ್ ಡಿಇ ವಿ.ವಿ.ಯಿಂದ ಉಚಿತ ಶಿಕ್ಷಣ

ವಿಜಯಪುರ ,ಏ,7: ಯುದ್ಧಪೀಡಿತ ಉಕ್ರೇನಿನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ, ದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮುಂದಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಮೂಲಕ ಅತಂತ್ರದಲ್ಲಿದ್ದ ವಿದ್ಯಾರ್ಥಿಗಳ ಪಾಲಿಗೆ ಆಧಾರ ಹಸ್ತ ಚಾಚುವ ಮೂಲಕ ದೇಶದ ಪ್ರಥಮ ವೈದ್ಯಕೀಯ ಶಿಕ್ಷಣ ಸಂಸ್ಥೆಯಾಗಿದೆ. ಈ ಕುರಿತು ವಿಜಯಪುರದಲ್ಲಿ ಇಂದು ಪ್ರಕಟಿಸಿದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್‍ರವರು, ವಿಜಯಪುರದಲ್ಲಿ…

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಏ, 07: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ ಏಪ್ರಿಲ್ 16 ಮತ್ತು 17 ರಂದು ಭಾ.ಜ.ಪ…

ಓ ಮೈ ಲವ್‌ಗೆ ಉಪೇಂದ್ರ ಸಾಥ್

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಸಿದ್ದಗೊಂಡಿರುವ ಹೊಸ ಥರದ ನಿರೂಪಣೆ ಒಳಗೊಂಡ ’ಓ ಮೈ ಲವ್’ ಚಿತ್ರದ ’ಏನಾಯ್ತೋ ನಾ ಕಾಣೆ’ ಲಿರಿಕಲ್ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಸ್ಮೈಲ್‌ಶ್ರೀನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಂಗೀತ ನಿರ್ದೇಶಕರು ಹಾಡಿನ ಟ್ಯೂನ್ ಕಳುಹಿಸಿಕೊಟ್ಟರು. ಅದನ್ನು ಕೇಳುತ್ತಿದ್ದ ಹಾಗೆ ರೋಮಾಂಚನವಾಯಿತು. ಪಲ್ಲವಿ ಚೆನ್ನಾಗಿದೆ. ಚರಣ ಬದಲಾವಣೆ ಮಾಡೋಣವೆಂದು ಹೇಳಲಾಯಿತು. ನಂತರ ಎರಡು ದಿವಸದಲ್ಲೆ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಚರಣ ಕೊಟ್ಟರು.…

Girl in a jacket