ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಗಂಭೀರವಾಗಿ ಪರಿಗಣಿಸಲು ಪೋಲಿಸರಿಗೆ ಸಿಎಂ ಸೂಚನೆ
ಬೆಂಗಳೂರು, ಏ, 08: ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಕರ್ನಾಟಕ ಪ್ರಗತಿಪರವಾದ ರಾಜ್ಯವಾಗಿದ್ದು, ಇದಕ್ಕೆ ಕೆಟ್ಟ ಹೆಸರು ತರಲು ಕೆಲವರು ಪದೇ ಪದೇ ಹೀಗೆ ಮಾಡುತ್ತಿದ್ದಾರೆ. ಪೋಲಿಸ್ ಅಧಿಕಾರಿಗಳಿಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಸುದ್ದಿಗಾರರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು. ಈ ಕುರಿತು ಎಲ್ಲಾ ಕಡೆ ತಪಾಸಣೆ ಮಾಡಲು ತಿಳಿಸಿದ್ದು, ಕರೆ ಮಾಡಿದವರ…