ಕೊನೆಗೂ ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ
ಶಿವಮೊಗ್ಗ, ಏ,14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಪ್ರತಿಭಟನೆ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತಿಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು…