11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಅನುಮತಿ
ಬೆಂಗಳೂರು, ಏ,18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆಯ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕೈಗಾರಿಕೆಗಳಿಗೆ ನೀಡಲಾಗಿರುವ…