Girl in a jacket

Daily Archives: April 23, 2022

ಟಾಟಾ ಮೋಟರ್ಸ್ ಕಾರುಗಳ ಬೆಲೆ ಏರಿಸಿದ ಕಂಪನಿ

ನವದೆಹಲಿ,ಏ,23: ಪೆಟ್ರೋಲ್, ಡೀಸೆಲ್ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯ ಪ್ರವೃತ್ತಿಯನ್ನು ಅನುಸರಿಸಿ, ಟಾಟಾ ಮೋಟಾರ್ಸ್ ಭಾರತದಲ್ಲಿ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ. ಇನ್‌ಪುಟ್ ವೆಚ್ಚದಲ್ಲಿನ ಏರಿಕೆಯನ್ನು ಸರಿದೂಗಿಸಲು, ಸ್ವದೇಶಿ ವಾಹನ ತಯಾರಿಕಾ ಕಂಪನಿ ವಿವಿಧ ಮಾದರಿ ಆಧಾರದ ಮೇಲೆ ಸರಾಸರಿ 1.1 ರಷ್ಟು ದುಬಾರಿಯಾಗುತ್ತವೆ. ಬೆಲೆ ಏರಿಕೆಯು ಇಂದಿನಿಂದ ಅಂದರೆ 23 ಏಪ್ರಿಲ್ 2022 ರಿಂದ ಕಾರಿನ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ. ಟಾಟಾ ಮೋಟಾರ್ಸ್ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿರುವುದು ಇದೇ ಮೊದಲಲ್ಲ. ಅವರು ಜನವರಿ…

150 ಸ್ಥಾನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ: ಕಟೀಲ್

ಬೆಂಗಳೂರು, ಏ, 23: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150  ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ,…

ಖರ್ಗೆಬಿಡುಗಡೆ ಆಡಿಯೋ ನೋಡಿಲ್ಲ ಆ ಬಗ್ಗೆಯೂ ತನಿಖೆ;ಬೊಮ್ಮಾಯಿ

ಬೆಂಗಳೂರು,ಏ,23:ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ಬಿಡುಗಡೆ ಮಾಡಿರುವ ಆಡಿಯೋವನ್ನು ನಾನು ನೋಡಿಲ್ಲ. ಈ ಬಗ್ಗೆಯೂ ತನಿಖೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋದಲ್ಲಿರುವ ಸಂಭಾಷಣೆಯನ್ನು ನಾನು ಕೇಳಿಲ್ಲ. ಆಡಿಯೋ ಇಬ್ಬರ ಮಧ್ಯೆ ನಡೆದಿದ್ದರೆ ಅವರ ಅರ್ಹತೆ, ವಿಶ್ವಾಸಾರ್ಹತೆಯನ್ನೂ ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಲಾಗುವುದು ಎಂದರು.ಆಡಿಯೋ ಕೂಡ ತನಿಖೆಗೆ ಒಳಪಡುತ್ತದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮಕೈಗೊಳ್ಳುತ್ತೇವೆ…

ಪಿಎಸ್ ಐ ನೇಮಕಾತಿಯಲ್ಲಿ ದೊಡ್ಡಮಟ್ಟದ ಅಕ್ರಮ,ಅಡಿಯೋ ರಿಲೀಜ್ ಮಾಡಿದ ಪ್ರಯಾಂಕ ಖರ್ಗೆ

ಕಲಬುರಗಿ,ಏ.23-:ರಾಜ್ಯದಲ್ಲಿ ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಕೈವಾಡವಿದ್ದು, ಭ್ರಷ್ಟಾಚಾರ ತಳಮಟ್ಟದಿಂದ ಮೇಲ್ಮಟ್ಟದವರೆಗೂ ಹಬ್ಬಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದ ಆಡಿಯೋ ರಿಲೀಸ್ ಮಾಡಿ ಮಾತನಾಡಿದರು. ಈ ಭ್ರಷ್ಟಾಚಾರ ಸಂಬಂಧ ಈವರೆಗೂ ಸಣ್ಣಪುಟ್ಟ ಮೀನುಗಳು ಮಾತ್ರ ಸಿಕ್ಕಿಬಿದ್ದಿವೆ. ಆದರೆ ಇದರಲ್ಲಿರುವ ದೊಡ್ಡ ದೊಡ್ಡ ತಿಮಿಂಗಲಗಳು ಸಿಕ್ಕಿಬಿದ್ದಿಲ್ಲ. ಪರೀಕ್ಷಾ ಮೇಲ್ವಿಚಾರಣೆ ನಡೆಸುತ್ತಿದ್ದ ನಾಲ್ವರು, ಮೂವರು ಮಧ್ಯವರ್ತಿಗಳು ಸೇರಿದಂತೆ ಕೆಲವೇ ಕೆಲವು ಮಂದಿಯನ್ನು ಬಂಧಿಸಲಾಗಿದೆ. ಆದರೆ…

ಪಿ.ಎಸ್.ಐ.ನೇಮಕಾತಿ ಅಕ್ರಮ ;ಆಡಿಯೋ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ-ಸಿಎಂ

ಬೆಂಗಳೂರು, ಎ,23:ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್…

Girl in a jacket