ಏ27ರ ನಂತರ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪ್ರಕಟ; ಸಿಎಂ
ಹುಬ್ಬಳ್ಳಿ, ಏ,24: ಕೋವಿಡ್ ನಾಲ್ಕನೆ ಅಲೆಯ ಆತಂಕ ಇರುವ ಕಾರಣ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27 ರಂದು ಪ್ರಧಾನ ಮಂತ್ರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ. ನಂತರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹಿಂದಿನ ಅನುಭವಗಳನ್ನು ಆಧರಿಸಿ ಕೋವಿಡ್ ನಿರ್ವಹಣೆಗೆ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುವುದು.…