ಮುಕ್ತ ಮತ್ತು ನಿರ್ಭೀತ ಮಾಧ್ಯಮವಿಲ್ಲದೆ ಸದೃಢ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬೆಂಗಳೂರು – ಎ, 25;ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.. ಬೆಂಗಳೂರು ಪ್ರೆಸ್ ಕ್ಲಬ್‌ನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರೆಸ್ ಕ್ಲಬ್ ಆವರಣದಲ್ಲಿ ‘ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ’ ಕುರಿತು ಮಾತನಾಡಿದ ಉಪರಾಷ್ಟ್ರಪತಿ ಗಳು, ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯಗಳ…