ಬಿಬಿಎಂಪಿಯಿಂದ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ
ಬಿಬಿಎಂಪಿಯಿಂದ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಬೆಂಗಳೂರು: ಜ. 19-ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು 4 ವಲಯಗಳಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ಪಶುಪಾಲನೆ ವಿಭಾಗದಿಂದ “ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ”ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲೂ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರೀಕರು…