ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ
ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ ಬೆಳಗಾವಿ, ಜರ, 21-ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು…