Girl in a jacket

Daily Archives: January 26, 2025

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ ಬಿಗ್‌ಬಾಸ್‌ ಕನ್ನಡ ಸೀಸನ್ 11ರಲ್ಲಿ ಗಾಯಕ ಹನುಮಂತ ಲಮಾಣಿ ಅವರು ವಿಜೇತರಾಗಿದ್ದಾರೆ. ಇದರೊಂದಿಗೆ ಕರ್ನಾಟಕದ ಕೋಟಿ ಕೋಟಿ ಜನರ ಆಸೆ ಈಡೇರಿದೆ. 52389318 ಮತಗಳನ್ನು ಪಡೆದು ಹನುಮಂತ ಗೆದ್ದು ಬೀಗಿದ್ದಾರೆ. ಕುರಿಗಾಯಿ ಹನುಮಂತ ಗೆಲ್ಲಬೇಕು ಎನ್ನುವುದು ಕನ್ನಡಿಗರ ಮನದಾಳದ ಮಾತಾಗಿತ್ತು. ಕೊನೆಗೂ ಹನುಮಂತನಿಗೆ ಜಯ ಸಿಕ್ಕಿದೆ. ಹೌದು…. ಕಿಚ್ಚ ಸುದೀಪ್ ಅವರು ಹನುಮಂತ ಈ ಬಾರಿ ವಿಜೇತ ಎಂದು ವೇದಿಕೆ ಮೇಲೆ ಘೋಷಣೆ ಮಾಡಿದರು. ಈ ಫಲಿತಾಂಶ…

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ ಬೆಂಗಳೂರು ಜ 26-ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ…

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ      by ಕೆಂಧೂಳಿ ನವದೆಹಲಿ, ಜ. 26 -ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ…

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ by ಕೆಂಧೂಳಿ ಬೆಂಗಳೂರು, ಜ.26-“ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು; “76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ…

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ by ಕೆಂಧೂಳಿ ಬೆಂಗಳೂರು,ಜ,26- ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು. ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ,26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು…

ರಾಜ್ಯದ ಐದು  ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ  ಗೆಹ್ಲೋಟ್

ರಾಜ್ಯದ ಐದು  ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ  ಗೆಹ್ಲೋಟ್ ಬೆಂಗಳೂರು, ಜ.26 -ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲರದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. 76 ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್…

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ?

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ? by ಕೆಂಧೂಳಿ ನವದೆಹಲಿ, ಜ,26-2025 ರ ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಮದ್ಯಮ ವರ್ಗದ ಜನರಿಗೆ ಸಿಹಿ ಸುದ್ದಿವಸಿಗುವ ಸಾದ್ಯತೆಗಳಿವೆ.10ರಿಂದ 15 ಲಕ್ಷ ರೂ ಕಡಿಮೆ ಆಧಾಯ ಹೊಂದಿದವರಿಗೆ ತೆರಿಗೆ ವಿನಾಯಿತಿ ಸಿಗುವ ಸುಳಿವು ನೀಡಿದೆ. ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಧ್ಯಮ ಜನರಿಗೆ ಸಿಹಿಸುದ್ದಿ ಸಿಗುವ ಸುಳಿವು ನೀಡಿದ್ದಾರೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ…

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ byಕೆಂಧೂಳಿ ಬೆಂಗಳೂರು,ಜ,೨೬-ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾದ ನಂತರ ಅಮೆರಿಕಾದಿಂದ ಬೆಂಗಲೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಭಾನುವಾರ ಬೆಳಿಗ್ಗೆ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಇಳಿದು ಬಂದ ಅವರನ್ನು ಅವರ ಸಾವಿರಾರು ಅಭಿಮಾನಿಗಳು ಹಾರ,ಹೂಗುಚ್ಚ ನೀಡಿ ಶುಭಕೋರಿ ಬರಮಾಡಿಕೊಂಡಿದ್ದು ಗಮನಸೆಳೆಯಿತು. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಾನಿಗಳು ಸಾದಹಳ್ಳಿ ಟೋಲ್…

Girl in a jacket