Girl in a jacket

Daily Archives: February 11, 2025

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ…

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ,…

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರುಫೆ,11-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ…

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್ by-ಕೆಂಧೂಳಿ ಬೆಂಗಳೂರು,ಫೆ,11- ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.…

ಬಿಜೆಪಿಯಲ್ಲಿ ನಿಲ್ಲದ ಸಮರ- ಸುಧಾಕರ್ ವಿರುದ್ಧ ತೊಡೆತಟ್ಟಿದ ಸಂದೀಪ್ ರೆಡ್ಡಿ

ಬಿಜೆಪಿಯಲ್ಲಿ ನಿಲ್ಲದ ಸಮರ- ಸುಧಾಕರ್ ವಿರುದ್ಧ ತೊಡೆತಟ್ಟಿದ ಸಂದೀಪ್ ರೆಡ್ಡಿ by-ಕೆಂಧೂಳಿ ಚಿಕ್ಕಬಳ್ಳಾಪುರ, ಫೆ,11-ಬಿಜೆಪಿಯಲ್ಲಿ ಬೀದಿ ರಂಪಾಟದ ರಗಳೆ ಸದ್ಯಕ್ಕೆ ನಿಂತಂತೆ ಕಾಣುತ್ತಿಲ್ಲ,ಒಬ್ಬಾರದ ಮೇಲೆ ಒಬ್ಬರು ನಾಯಕರ ವಿರುದ್ಧ ದಂಗೇಳುತ್ತಿದ್ದಾರೆ..ಈಗ ಚಿಕ್ಕಬಳ್ಳಾಪುರ ದ ಸಂದೀಪ್ ರೆಡ್ಡಿ ಸರದಿ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದ ಸಂದೀಪ್ ರೆಡ್ಡಿ ನೇಮಕಾತಿಗೆ ತಡೆಯೊಡ್ಡಿದ ಮಾಜಿ ಸಚಿವ ಡಿ.ಸುಧಾಕರ್ ವಿರುದ್ಧ ನೇರ ಸೆಣಸಾಟಕ್ಕೆ ಅಣಿಯಾಗಿದ್ದಾರೆ. ಸಂದೀಪ್ ರೆಡ್ಡಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ಸುಧಾಕರ್ ಖಂಡಿಸಿದ್ದರು. ಅದಾದ ಬಳಿಕ ನಿನ್ನೆಯಷ್ಟೇ ಹೈಕಮಾಂಡ್ ಈ ಆಯ್ಕೆಗೆ…

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ನವ ದೆಹಲಿ,ಫೆ,11- ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ ನಮ್ಮ ಇಡೀ ದೇಶ…

1990s” ಚಿತ್ರದ ಟ್ರೇಲರ್ ಅನಾವರಣ

“1990s” ಚಿತ್ರದ ಟ್ರೇಲರ್ ಅನಾವರಣ by-ಕೆಂಧೂಳಿ ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ “1990s”. ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. “ತಟ್ ಅಂತ…

ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ. 

ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ.   by-ಕೆಂಧೂಳಿ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ…

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ- ಅಶೋಕ್

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ- ಅಶೋಕ್   by-ಕೆಂಧೂಳಿ ಬೆಂಗಳೂರು, ಫೆ,11-ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್‌ ಗಾಂಧಿ, ಕೇಜ್ರಿವಾಲ್‌ ಬಗ್ಗೆ…

ಅವಹೇಳನಕಾರಿ ಪೋಸ್ಟ್- ಮೈಸೂರಿನಲ್ಲಿ ಕಲ್ಲು ತೂರಾಟ, ಗಲಭೆ

ಅವಹೇಳನಕಾರಿ ಪೋಸ್ಟ್- ಮೈಸೂರಿನಲ್ಲಿ ಕಲ್ಲು ತೂರಾಟ ಗಲಭೆ   by-ಕೆಂಧೂಳಿ ಮೈಸೂರು, ಫೆ,11-ದೆಹಲಿಯಲ್ಲಿ ಗೆಲುವು ಸಾಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಮೈಸೂರಿನಲ್ಲಿ ಈಗ ಸಮಾಜಿಕ ಸ್ವಾಸ್ಥ್ಯವನ್ನೇ ಕೆಡಸಿದೆ. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.…

ಇಂದಿನಿಂದ ಮೂರು ದಿನಗಳ ಕಾಲ  ಬೆಂಗಳೂರು ಅರಮನೆ ಮೈದಾನದಲ್ಲಿ   ಇನ್ವೆಸ್ಟ್ ಕರ್ನಾಟಕ ಸಮಾವೇಶ

ಇಂದಿನಿಂದ ಮೂರು ದಿನಗಳ ಕಾಲ  ಬೆಂಗಳೂರು ಅರಮನೆ ಮೈದಾನದಲ್ಲಿ  ಇನ್ವೆಸ್ಟ್ ಕರ್ನಾಟಕ ಸಮಾವೇಶ by-ಕೆಂಧೂಳಿ ಬೆಂಗಳೂರು,ಫೆ11-ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ʼಪ್ರಗತಿಯ ಮರುಕಲ್ಪನೆʼ (Reimagining Growth) ಧ್ಯೇಯದ ಇನ್ವೆಸ್ಟ್‌ ಕರ್ನಾಟಕ 2025ರ ಮೂಲಕ ವಿಶ್ವದಾದ್ಯಂತದ ಹೂಡಿಕೆದಾರರನ್ನು ರಾಜ್ಯದತ್ತ ಚುಂಬಕದಂತೆ ಸೆಳೆಯಲು ಸಜ್ಜಾಗಿದೆ. ಮಂಗಳವಾರದಿಂದ ಶುಕ್ರವಾರದವರೆಗೆ (ಫೆ. 11ರಿಂದ 14) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು,…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ಅಂಕಿತಕ್ಕೆ ಮತ್ತೊಮ್ಮೆ ರಾಜ್ಯಪಾಲರಿಗೆ ರವಾನಿಸಿದ ಸರ್ಕಾರ

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ಅಂಕಿತಕ್ಕೆ ಮತ್ತೊಮ್ಮೆ ರಾಜ್ಯಪಾಲರಿಗೆ ರವಾನಿಸಿದ ಸರ್ಕಾರ  by-ಕೆಂಧೂಳಿ ಬೆಂಗಳೂರು, ಫೆ,12- ರಾಜ್ಯ ಸರ್ಕಾರ ಮತ್ತೊಮ್ಮೆ ಸಮಗ್ರ ವಿವರಣೆಗಳೊಂದಿಗೆ ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಕರಡನ್ನು  ರಾಜ್ಯಪಾಲರು ರವಾನಿಸಿದೆ. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು…

Girl in a jacket