ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ
ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಮಾ,09-ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.…