Girl in a jacket

Daily Archives: March 22, 2025

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್ by-ಕೆಂಧೂಳಿ ಬೆಂಗಳೂರು,ಮಾ,22- ಶಕ್ತಿಸೌಧವಿಧಾನಸೌಧಕ್ಕೆ ಇನ್ನು ಮುಂದೆ ಶಾಶ್ವತ ವಿದ್ಯುತ್‌ ದೀಪಾಲಂಕಾರ ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪೆಸಲಾಗುವುದು ಎಂದು ವಿಶಾನಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್‌ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ದೀಪಾಲಂಕಾರಕ್ಕೆ 5 ಕೋಟಿ ರೂ.ವೆಚ್ಚ ಮಾಡಲಾಗುತ್ತಿದ್ದು, ಪ್ರತಿ ಶನಿವಾರ, ಭಾನುವಾರ ಸಂಜೆ 6.30ಕ್ಕೆ ದೀಪಾಲಂಕಾರ ಮಾಡಲಾಗುತ್ತದೆ. ರಾಷ್ಟ್ರೀಯ ಹಬ್ಬಗಳಾದ…

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್ by- ಕೆಂಧೂಳಿ ಬೆಂಗಳೂರು ಮಾ22- ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಅಭಿಪ್ರಾಯಪಟ್ಟರು. ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ, “ಭಾಷೆ: ಸಾಧ್ಯತೆ ಮತ್ತು ಸವಾಲುಗಳು” ಕುರಿತ ಗೋಷ್ಠಿಯಲ್ಲಿ ಆಶಯ ಮಾತುಗಳನ್ನು ಆಡಿದರು. ನಾನು ಸಾಹಿತಿ ಅಲ್ಲ.…

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ by-ಕೆಂಧೂಳಿ ಬೆಂಗಳೂರು, ಮಾ,22- ಬೆಳಗಾವಿಯಲ್ಲಿ ಎಂಇಎಸ್ ವರ್ತನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ. ಶನಿವಾರ ಆಗಿರುವುದರಿಂದ ಸಂಚಾರ ದಟ್ಟಣೆ ತುಸು ಕಡಿಮೆ ಇದೆ.…

ಹನಿಟ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ಧರಾಮಯ್ಯ

ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ, 21- ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು . ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು…

ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ, 21-ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ,2025-26 ರಲ್ಲಿ ನಮ್ಮ ಸರ್ಕಾರ ಮಂಡಿಸಿದ ಬಜೆಟ್ ಬಡವರ, ಮಹಿಳೆಯರ, ಮಕ್ಕಳ, ಶೋಷಿತರ, ದುರ್ಬಲ ವರ್ಗದವರ, ಯುವಜನರ, ಕಾರ್ಮಿಕರ, ರೈತರ, ಹಿಂದುಳಿದವರ, ಅಲ್ಪಸಂಖ್ಯಾತರ ಏಳಿಗೆ, ಹಿತರಕ್ಷಣೆಯನ್ನು ಗಮನದಲ್ಲಿ ಇಟ್ಟುಕೊಂಡು ತಯಾರಿಸಿದ್ದಾಗಿದೆ .ಜೊತೆಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿ…

Girl in a jacket