Girl in a jacket

Daily Archives: April 2, 2025

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ by-ಕೆಂಧೂಳಿ ಜಮಖಂಡಿ, ಏ.02-“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ…

ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

‘ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ by-ಕೆಂಧೂಳಿ ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದರು. “ಕಾಲಘಟ್ಟ” ಇದು ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ…

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ” by-ಕೆಂಧೂಳಿ ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್…

ಪೆನ್ ಡ್ರೈವ್” ಚಿತ್ರದಲ್ಲಿ ಖಡಕ್ ಪೊಲೀಸ್ ಆಗಿ ಮಾಲಾಶ್ರೀ

“ಪೆನ್ ಡ್ರೈವ್”ಚಿತ್ರದಲ್ಲಿ   ಖಡಕ್   ಪೊಲೀಸ್ ಆಗಿ  ಮಾಲಾಶ್ರೀ by-ಕೆಂಧೂಳಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ…

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಕೇಂದ್ರಸಚಿವ ಗಡ್ಕರಿಗೆ ಸಿಎಂ ಮನವಿ

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಕೇಂದ್ರಸಚಿವ ಗಡ್ಕರಿಗೆ ಸಿಎಂ ಮನವಿ by-ಕೆಂಧೂಳಿ ನವದೆಹಲಿ, ಏ, 02- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ.…

ಏ.27 ಕ್ಕೆ 42345 ಮನೆ ಹಂಚಿಕೆ – ಜಮೀರ್ ಅಹಮದ್ ಖಾನ್

ಏ.27 ಕ್ಕೆ 42345 ಮನೆ ಹಂಚಿಕೆ – ಜಮೀರ್ ಅಹಮದ್ ಖಾನ್ by-ಕೆಂಧೂಳಿ ಬೆಂಗಳೂರು ,ಏ,02-ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣ ದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ…

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.02-“ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ…

ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿ ಆಕ್ರೋಶ

ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿ ಆಕ್ರೋಶ by-ಕೆಂಧೂಳಿ ಬೆಂಗಳೂರು, ಏ.02-“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ದರ ಏರಿಕೆ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಬಗ್ಗೆ ಕೇಳಿದಾಗ, “ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ.…

ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ: ವಿಜಯೇಂದ್ರವಾಗ್ದಾಳು

ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ: ವಿಜಯೇಂದ್ರವಾಗ್ದಾಳು by-ಕೆಂಧೂಳಿ ಬೆಂಗಳೂರು,ಏ,02- ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ…

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: .ಎಂ.ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: .ಎಂ.ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು ಏ 2: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ…

Girl in a jacket