Girl in a jacket

Daily Archives: April 7, 2025

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಏನು?: ವಿಜಯೇಂದ್ರ ಪ್ರಶ್ನೆ

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆಏನು?: ವಿಜಯೇಂದ್ರ ಪ್ರಶ್ನೆ by-ಕೆಂಧೂಳಿ ಮೈಸೂರು,ಏ,07-: ಕಾಂಗ್ರೆಸ್ಸಿನದು ಬಡವರ ವಿರೋಧಿ, ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ದರಿದ್ರ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಜನಾಕ್ರೋಶ ಯಾತ್ರೆ ಆರಂಭದ ಸಂಬಂಧ ಇಂದು ಇಲ್ಲಿನ ಗಾಂಧಿ ಸ್ಕ್ವೇರ್ ನಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತಾರು ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ನೀವೇನು ಅಭಿವೃದ್ಧಿ…

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ by-ಕೆಂಧೂಳಿ ಬೆಂಗಳೂರು,ಏ,07-ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ,ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು…

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಏ 7:  ಮೇ1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ-ಪ್ರಹ್ಲಾದ್ ಜೋಶಿ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶಯಾತ್ರೆ-ಪ್ರಹ್ಲಾದ್ ಜೋಶಿ by-ಕೆಂಧೂಳಿ ಮೈಸೂರು, ಏ,:07- ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನೊಂದೆಡೆ ಸರಕಾರವು ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದರು.…

Girl in a jacket