ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ:ಸಿ.ಎಂ. ಸಿದ್ದರಾಮಯ್ಯ
ಬೆಳಗಾವಿ,ಏ,12-ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್…