ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಏ.13-“ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ…