ಗಣತಿಯ ಲಾಭ ನಿಮಗೋ? ಅಥವಾ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ?-ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು,ಏ,17,ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ…