Girl in a jacket

Daily Archives: April 24, 2025

ಲಂಚ ಪಡೆಯುವ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ದಾಳಿ

ಬೆಂಗಳೂರು ಏ.24 -ಪಾನ್ ಮಸಾಲ ಅಕ್ರಮ ಸಾಗಣಿಗೆ ಅನುಕೂಲ ಮಾಡಿಕೊಡಲು 20 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಸಂಜೆ ನಾಗರಭಾವಿ ನಮ್ಮೀರ ತಿಂಡಿ ಹೊಟೇಲ್ ಹತ್ತಿರ ಆರೋಪಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್. ಅವರು ಖಾಸಗಿ ವ್ಯಕ್ತಿಯಾದ ಮನೋಜ್ ಎಂ ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ…

ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್

ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ  ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ, ಏ.24-ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ…

ಮೈಸೂರು ವಿಭಾಗದ 3647 ಕೋಟಿ42 ಲಕ್ಷದ ಕಾಮಗಾರಿಗೆ ಸಂಪುಟ ಸಭೆ ಅನುಮೋದನೆ

ಮಲೇಮಹಾದೇಶ್ವರ ಬೆಟ್ಟ,(ಮೈಸೂರು)ಏ,23-ಮೈಸೂರು ವಿಭಾಗದಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ  ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು   ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ…

Girl in a jacket