Girl in a jacket

Daily Archives: April 28, 2025

ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕ

ಬೆಂಗಳೂರು, ಏ,28-ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕಗೊಂಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ಆದೇಶ ಪ್ರತಿಯನ್ನು ವೀಣಾ ಕಾಶಪ್ಪನವರ್ ಅವರಿಗೆ ನೀಡಿ ಶುಭ ಹಾರೈಸಿದರ.

ನೌಕಾಪಡೆಗೆ ರೆಫೆಲ್ ಫೈಟರ್ ಜೆಟ್ಗಳ ಖರೀದಿಗೆ ಭಾರತ ಫ್ರಾನ್ಸ್ ಸಹಿ

ನವದೆಹಲಿ, ಏ,28-ನೌಕಾ ರೂಪಾಂತರದ ರಫೆಲ್ ಫೈಟರ್ ಜೆಟ್ಗಳನ್ನು ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಭಾರತ ಮತ್ತು ಫ್ರಾನ್ಸ್ ಇಂದು ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ನಿಂದ ಜೆಟ್ಗಳನ್ನು ಖರೀದಿಸುತ್ತಿದೆ. ಸಹಿ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು…

ಮೇ 9 ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸೂತ್ರದಾರಿ’

ಈಗಲ್  ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. ನಾನು ಇಲ್ಲಿಗೆ ಬರಲು…

‘ಗ್ರೀನ್’ ಮನೋವೈಜ್ಞಾನಿಕ ಥ್ರಿಲರ್ ಚಿತ್ರ

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ “ಗ್ರೀನ್” ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೀನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ “ಗ್ರೀನ್” ಒಂದು ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಎನ್ನುವುದು ತಿಳಿಯುತ್ತದೆ ಹಾಗೂ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸುತ್ತದೆ. ಚಿಕ್ಕ…

ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಆರ್‌.ಅಶೋಕ

ಬೆಂಗಳೂರು, ಏ, 28-ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ…

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ,ಏ ,28-ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ…

ಡೆಲ್ಲಿ ತಂಡದ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ನವದೆಹಲಿ,ಏ,೨೭-ಇಲ್ಲಿನ ಅರುಣ್‌ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನೀಡಿದ ೧೬೩ ರನ್‌ಗಳ ಗುರಿಯನ್ನು ಬೆನ್ನು ಹತ್ತಿದ ಆರ್‌ಸಿಬಿ ಇನ್ನೂ ಒಂಬತ್ತು ಎಸೆತಗಳ ಬಾಕಿ ಇರುವಾಗಲೇ ೬ ವಿಕಟ್ ಅಂತರದಿಂದ ಭರ್ಜರಿ ಜಯ ಸಾಧಿಸಿ ಸೇಡು ತೀರಿಸಿಕೊಂಡಿದೆ. ಹೌದು..ವಿರಾಟ್ ಕೊಹ್ಲಿ ಯಾರು ಏನೇ ಕೊಟ್ಟರೂ ಅದನ್ನು ತಿರುಗಿಸಿ ಕೊಡುವುದರಲ್ಲಿ ನಿಸ್ಸೀಮರು.. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ೧೬೩ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ…

Girl in a jacket