ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚ ಪಡೆಯದೇ ಮಾಡಲಾಗಿದೆ- ಸಿಎಂ
ಬೆಂಗಳೂರು, ಏ, 29-ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು.…