Girl in a jacket

Daily Archives: May 3, 2025

ರೋಚಕ ಜಯ ಸಾಧಿಸಿದ ರಾಯಲ್ಸ್ ಚಾಲೆಂಜರ‍್ಸ

ಬೆಂಗಳೂರು,ಮೇ,೦೪-ಕೊನೆಯ ಎಸೆತದವರೆಗೂ ರೋಚಕ ಉಳಿಸಿಕೊಂಡು ಕೊನೆಯ ಬಾಲಿನಲ್ಲಿ ಹೊಡೆದ ಹೊಡೆತ ಜಯದತ್ತ ಸಾಗಿತು, ಇದು ಕ್ರಿಕೆಟ್ ಅಭಿಮಾನಿಗಳಿಗೆ ಒಂದು ರೀತಿ ಕುತೂಹಲದಂತಿತ್ತು. ಶನಿವಾರ ಬೆಂಗಳೂರಿನಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ‍್ಸ ಮತ್ತು ಚೆನೈ ಸೂಪರ್ ಕಿಂಗ್ಸ್ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ರಾಯಲ್ಸ್ ಚಾಲೆಂಜರ‍್ಸ್ ತಂಡ ರೋಚಕ ಜಯಗಳಿಸಿತು. ಕೊನೆಯ ಎಸೆತದವರೆಗೂ ರೋಚಕ ರಸದೌತಣ ನೀಡಿದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಯು ೨ ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಎದುರು ಜಯಿಸಿತು. ಇದರೊಂದಿಗೆ ಪ್ಲೇ ಆಫ್ ಹೊಸ್ತಿಲಿಗೆ ಬಂದು ನಿಂತಿತು.…

ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ತುಮಕೂರು, ಮೇ3: ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಸಚಿವರು. ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ…

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಶಿರಸಿ,ಮೇ,03-: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ ಕುಮಾರಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇಂದು ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. “ಕುಮಾರಿ ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ಮಕ್ಕಳ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- 8 ಮಂದಿ ಬಂಧನ

ಮಂಗಳೂರು, ಮೇ,03-ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.…

ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಲ್ಲಿ ಕೋಮುಗಲಭೆನಿಗ್ರಹ ಪಡೆ ರಚನೆ-ಜಿ.ಪರಮೇಶ್ವರ್

ಮಂಗಳೂರು,ಮೇ,೦೩-ರಾಜ್ಯದಲ್ಲಿ ಕೋಮುಗಲಭೆಯನ್ನು ಹತ್ತಿಕ್ಕಲು ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸುಹಾಸ್‌ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು ವರ್ಷಗಳೀಂದ ಕೋಮುಗಲಭೆಯಾಗುತ್ತಿವೆ ಈ ಹಿನ್ನೆಲೆಯಲ್ಲಿ ಇನ್ನುವುಂದೆ ಇಂತ ಘಟನೆಗಳು ಸಂಭವಿಸದಂತೆ ಕೋಮುಗಲಭೆ ನಿಗ್ರಹ ಪಡೆಯನ್ನು ರಚಿಸುತ್ತೇವೆ ಎಂದರು. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ…

ಸುಹಾಸ್ ಶೆಟ್ಟಿ ಹತ್ಯೆಪ್ರಕರಣ-ಐವರು ಆರೋಪಿಗಳು ಪೊಲೀಸರ ವಶ

ಮಂಗಳೂರು,ಮೇ,೦೩-ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು…

Girl in a jacket