Girl in a jacket

Daily Archives: May 5, 2025

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ 64,600 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿಕೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಮೇ,05- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು, ಮೇ 5, 2025ರ ತನಕ ಕನಿಷ್ಠ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೇ 26 ರಿಂದ ಜೂನ್ 2ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆ-2 ಗೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿರುವುದರಿಂದ ಸಂತೋಷ ವ್ಯಕ್ತಪಡಿಸಿದರು. “ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ನೋಂದಣಿ ಇನ್ನೂ ಮುಂದುವರಿದಿರುವುದರಿಂದ ಈ…

ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಕರ್ನಾಟಕ ಅಭಿವೃದ್ಧಿಗೆ ದಿಕ್ಸೂಚಿ-ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಬೆಂಗಳೂರು,ಮೇ,05-ಈ ತಿಂಗಳ ಅಂತ್ಯದಲ್ಲಿ ( ಮೇ 30 ಹಾಗೂ 31ಕ್ಕೆ) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ʼಉತ್ಪಾದನಾ ಮಂಥನ್‌ʼ ಕುರಿತ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಇಂದು ಇಲ್ಲಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ʼಕರ್ನಾಟಕವನ್ನು ʼಜಾಗತಿಕ ತಯಾರಿಕಾ ಕೇಂದ್ರʼವನ್ನಾಗಿ ಅಭಿವೃದ್ಧಿಪಡಿಸುವ ಮುನ್ನೋಟ ಕುರಿತ ಈ ಎರಡು ದಿನಗಳ ಚಿಂತನ – ಮಂಥನ ಸಮಾವೇಶದಲ್ಲಿ ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಸಿಇಒ ಹಾಗೂ…

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಹಕಾರ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಮೇ 5-ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌ ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂಪನಾ ಅವರ ” ಚಾರು ವಸಂತ” ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ “ಚಾರು ವಸಂತ” ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ…

ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ನಿಷೇಧ

ಬೆಂಗಳೂರು, ಮೇ,05-ಕನ್ನಡಿಗರಿಗೆ ಅವಮಾನ ಮಾಡಿ ದುರ್ವರ್ತನೆ ತೋರಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ. ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ ಗಾಯಕ ಸೋನು ನಿಗಮ್ ಕಾಲೇಜೊಂದರ ಕಾರ್ಯಕ್ರಮಕ್ಕೆ ಬಂದು ಕನ್ನಡದ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ಕುಚೇಷ್ಟೆ ಮೆರೆದಿದ್ದರು. ಇದರ ಬಳಿಕ ಕನ್ನಡಪರ ಸಂಘಟನೆಗಳು ಕ್ಷಮೆ ಕೋರುವಂತೆ ಆಗ್ರಹಿಸಿದ ನಂತರ, ಕ್ಷಮೆ ಕೇಳದೇ ತನ್ನ ಹೇಳಿಕೆಗೆ ಸ್ಪಷ್ಟನೆ ಕೊಡುವ ಜೊತೆಗೆ ಮತ್ತೊಮ್ಮೆ ಕನ್ನಡಿಗರನ್ನು ಪುಂಡರು ಎಂದು…

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 05-“ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ…

ರಾಜ್ಯದಲ್ಲಿ ಇಂದಿನಿಂದ 3 ಹಂತದ ಒಳಮೀಸಲಾತಿ ಸಮೀಕ್ಷೆ-ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು ಮೇ 5-ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು…

Girl in a jacket