Girl in a jacket

Daily Archives: May 7, 2025

ಒತ್ತುವರಿ ಜಾಗ ಪರಶೀಲನೆ ಮಾಡಿದ ತಹಶಿಲ್ದಾರ್

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಮೇ,07-  ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಖಾಸಗಿ ಲೇಔಟ್ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಕ್ಕೆ ತಾಲ್ಲೂಕು ದಂಢಾಧಿಕಾರಿ ರೆಹಾನ್ ಪಾಷ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಕೀಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅರಬಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ೪೫ರ ರಸ್ತೆಯ ಮದ್ಯದಿಂದ ೨೮.೫೦ ಮೀಟರ್‌ಗಳಷ್ಟು ಜಾಗವನ್ನು ಬಿಟ್ಟು ಖಾಸಗಿ ಲೇಔಟ್ ನಿರ್ಮಾಣ ಮಾಡಬೇಕು ಎಂಬ ನಿಯಮವಿದ್ದರೂ ಕೂಡ ಕಾನೂನು ಬಾಹಿರವಾಗಿ ಖಾಸಗಿ ಲೇಔಟ್ ನವರು ೧೪ ಮೀಟರ್‌ಗಳಷ್ಟು ಒತ್ತುವರಿ ಮಾಡಿದ್ದಾರೆ…

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ- ಸಂತೋಷ್ ಲಾಡ್

ಬೆಂಗಳೂರು, ಮೇ 7- ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು. ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು…

ಶಾಂತಿ ಮಂತ್ರ ಜಪಿಸುತ್ತಿರುವ  ಕಾಂಗ್ರೆಸ್, ಇದು ದೇಶಕ್ಕೆ ಮಾಡಿದ ಅಪಮಾನ:  ಆರ್.ಅಶೋಕ ಟೀಕೆ

ಬೆಂಗಳೂರು, ಮೇ 7-ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಪಕ್ಷ ಯಾರ ಪರ ಇದೆ? ಯುದ್ಧದ ಸಮಯದಲ್ಲಿ ಶಾಂತಿಯ ಮಂತ್ರ ಹೇಳುವ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣ ದಾರಿ ತಪ್ಪಿ ಹೋಗಿದೆ. ಇದು ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಯೋಧರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಪಾಕಿಸ್ತಾನದ ನೆಲದಲ್ಲೂ ದಾಳಿ ಮಾಡಬಹುದು ಎಂಬುದನ್ನು ಭಾರತ…

ಆಪರೇಷನ್ ಸಿಂಧೂರ್’ ನಮ್ಮ ಸೇನೆ ನಮ್ಮ ಹೆಮ್ಮ- ಜಮೀರ್ ಅಹಮದ್ ಖಾನ್

ಬೆಂಗಳೂರು,ಮೇ,7- ಪೆಹಲ್ಗಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ…

ಉಗ್ರಗಾಮಿಗಳ ನೆಲೆ ನಾಶಮಾಡಿದ ಭಾರತೀಯ ಸೈನಿಕರ ದಿಟ್ಟತನ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,7-ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,- ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ…

ಹಿರಿಯ ಸಾಹಿತಿ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಬೆಂಗಳೂರು, ಮೇ,7-ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ಇಂದು ನಿಧನರಾದರು. ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರೊಳೊಗೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ. .ಎಸ್.ಸಿದ್ದಲಿಂಗಯ್ಯನವರು ಹುಟ್ಟಿದ್ದು ಫೆಬ್ರವರಿ…

ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ದಾಳಿ

ನವದೆಹಲಿ,ಮೇ,7- ಪಾಕಿಸ್ತಾನಿ ಉಗ್ರರ ಮಟ್ಟ ಹಾಕಲು ಭಾರತ ಆಪರೇಷನ್ ಸಿಂಧೂರ ಹೆಸರಲ್ಲಿ ಆರಂಭಿಸಿರುವ ದಾಳಿಯಲ್ಲಿಪಾ ಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು ಬೆಳಗಿನ ಜಾವ ದಾಲಕಿ ನಡೆಸಿದೆ. ಕಕ್ಷಣಾ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದೆ. ಒಟ್ಟು ಒಂಬತ್ತು ತಾಣಗಳ…

Girl in a jacket