ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ: ಎಂ ಬಿ ಪಾಟೀಲ
ಬೆಂಗಳೂರು,ಮೇ,08- ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಕ್ಷಿಪ್ರವಾಗಿ ಸ್ಪಂದಿಸುವ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಅಧಿಕಾರಿಗಳು ಕರ್ನಾಟಕವನ್ನು ಕೈಗಾರಿಕಾ ಪ್ರಪಂಚದಲ್ಲಿ ಮತ್ತಷ್ಟು ಸುಭದ್ರವಾಗಿ ಮತ್ತು ಪುರೋಗಾಮಿಯಾಗಿ ಬೆಳೆಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದ್ದಾರೆ. ಎರಡೂ ಇಲಾಖೆಗಳ ಕಿರಿಯ ಶ್ರೇಣಿ ಮತ್ತು ಉನ್ನತಾಧಿಕಾರಿಗಳಿಗೆ ವಿಕಾಸಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವೀಗ ಏಕಕಾಲದಲ್ಲಿ ಜಾಗತೀಕರಣ ಮತ್ತು ನೆರೆಹೊರೆಯ ರಾಜ್ಯಗಳ ಸ್ಪರ್ಧೆ…