ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 09-ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಸುಮಾರು 3 ಸಾವಿರ ಕೊಳವೆ…