ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ: ಡಿ.ಕೆ. ಶಿ
ಬೆಂಗಳೂರು, ಮೇ 12-“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ. ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಉತ್ತರಿಸಿದರು, ಎರಡು ವರ್ಷಗಳ ಸಂಭ್ರಮಾಚರಣೆ ಬಗ್ಗೆ ಕೇಳಿದಾಗ, “ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು.…