ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳು ನಾಳೆಯಿಂದ ಕಾರ್ಯಾರಂಭ
ನವದೆಹಲಿ,ಮೇ14-: ದೇಶಾದ್ಯಂತ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು. NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು…