ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿಕೆಶಿ
ರಾಮನಗರ, ಮೇ 14-“ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ…