Girl in a jacket

Daily Archives: May 16, 2025

ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಸಿ.ಟಿ.ರವಿ

ಬೆಂಗಳೂರು,ಮೇ,16 ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ;…

ಬೆಂಬಲ ಬೆಲೆಯಲ್ಲಿ ಶೀಘ್ರ ಹಿಂಗಾರು ಸೂರ್ಯಕಾಂತಿ ಖರೀದಿ: ಶಿವಾನಂದ ಪಾಟೀಲ

ಬೆಂಗಳೂರು,ಮೇ,16-ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಕೇಂದ್ರ ಸರ್ಕಾರ ನಾಫೆಡ್‌ ಹಾಗೂ ಎನ್‌ ಸಿ ಸಿ ಎಫ್‌…

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು, ಮೇ 16,-“ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ…

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಸಿಎಂ

ವಿಜಯನಗರ(ಹೊಸಪೇಟೆ) ಮೇ 16- ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ…

Girl in a jacket