ಅರಣ್ಯ ರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದು: ಈಶ್ವರ ಖಂಡ್ರೆ
ಹೆಮ್ಮಡಗಾ (ಖಾನಾಪುರ), ಮೇ 17-ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ (ಗೌವಳಿ) ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು. ಮಾನವನ ಹಸ್ತಕ್ಷೇಪ ಇಲ್ಲದಿದ್ದರೆ ಅರಣ್ಯ…