Girl in a jacket

Daily Archives: May 21, 2025

ಡೆಂಗ್ಯೂ ನಿಯಂತ್ರಣಕ್ಕೆ  240 ಆರೋಗ್ಯ ನಿರೀಕ್ಷಣಾಧಿಕಾರಿಗಳ ನೇಮಿಸಲಾಗಿದೆ – ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,21-ಡೆಂಗ್ಯೂ ತಡೆಗಟ್ಟಲು ಈ ಬಾರಿ ಬೆಂಗಳೂರಿನಲ್ಲಿ ಹೆಚ್ವಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.‌ ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ…

ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ,21-ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ…

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು, ಮೇ, 21- ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 21-“ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದರು. ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಮಾಧ್ಯಮಗೋಷ್ಠಿ ಹಾಗೂ ಮಾಧ್ಯಮ ಪ್ರತಿಕ್ರಿಯೆ ನೀಡಿ…

ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಿ-ಅಶೋಕ್ ಒತ್ತಾಯ

ಬೆಂಗಳೂರು, ಮೇ 21-ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್‌ ಸರ್ಕಾರಕ್ಕೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಆರ್ಮಿ ಜನರಲ್‌ ಆಸಿಫ್‌ ಮುನೀರ್‌ಗೆ ಫೀಲ್ಡ್‌ ಮಾರ್ಷಲ್‌ ಬಿರುದು ನೀಡಿದಂತೆಯೇ, ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಜನರು ತೆರಿಗೆ ಭಾರವನ್ನು…

ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ: ಕೆ.ವಿ.ಪ್ರಭಾಕರ್ ಸಂತಸ

ಬೆಂಗಳೂರು ಮೇ 21- ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು…

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಮೇ21-ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ…

Girl in a jacket