ಐಪಿಎಲ್ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಸಾವನ್ನಪ್ಪಿದ 11ಕುಟಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು, ಜೂ,04-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ದೊಡ್ಡ ಪ್ರಮಾಣದ ದುರಂತದಲ್ಲಿ ಮೃತಪಟ್ಟ 11 ಕುಟುಂಬಕ್ಕೆ ತಲಾ10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ,ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಟಿ ನಡೆಸಿ ಘಟನೆಯ ಬಗ್ಗೆ ವಿವರನೀಡಿದರು. ಅಲ್ಲದೆ ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ನಿನ್ನೆ…