Girl in a jacket

Daily Archives: June 19, 2025

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿದೆ “ಮತ್ತೆ ಮೊದಲಿಂದ” ಗೀತಗುಚ್ಛ

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) “ಮತ್ತೆ ಮೊದಲಿಂದ”. ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು…

ಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ – ಪ್ರಲ್ಹಾದ್ ಜೋಶಿ

ಬೆಂಗಳೂರು,ಜೂ,19-ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ಮುಂದಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾಮಾನ್ಯ ಜನರು, ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ ಆಗಲಿದೆ; ಇದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಸತಿ ಯೋಜನೆಗಳಡಿ ಮುಸ್ಲಿಮರಿಗೆ ಶೇ 15 ಮೀಸಲಾತಿ ನೀಡಿದೆ. ಯಾವುದೇ ಮಾದರಿಯ…

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್.ಅಶೋಕ

ಬೆಂಗಳೂರು, ಜೂ, 19-ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ…

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಡು ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ಜೂ,19-ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ ಕರಿತು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು…

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು, ಜೂ.19-ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.…

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.19-“ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ…

Girl in a jacket