ಉಡುಪಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಮಾಷ್ ಮೇಕ್ಸ್‌ನ ಬಯೊಚಾರ್ ತಯಾರಿಕಾ ಘಟಕ ಸ್ಥಾಪನೆ
ಬೆಂಗಳೂರು,ಜೂ,20-ಸುಸ್ಥಿರ ಇಂಧನ ಪರಿಹಾರಗಳಲ್ಲಿ ಮುಂಚೂಣಿಯಲ್ಲಿ ಇರುವ ಡೆನ್ಮಾರ್ಕ್‌ನ ಮಾಷ್ ಮೇಕ್ಸ್ ಕಂಪನಿಯು ಉಡುಪಿಯಲ್ಲಿ ಅಂದಾಜು ₹100 ಕೋಟಿ ವೆಚ್ಚದಲ್ಲಿ ಮಣ್ಣಿನ ಫಲವತ್ತತೆ ಸುಧಾರಿಸುವ ಗೋಡಂಬಿ ಸಂಸ್ಕರಣೆಯ ತ್ಯಾಜ್ಯ ಬಳಸಿ ಸಮೃದ್ಧ ಇಂಗಾಲ ಹೊಂದಿರುವ ಬಯೊಚಾರ್ ತಯಾರಿಸುವ ಘಟಕ ಸ್ಥಾಪಿಸಲಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ಇದು ಭಾರತದಲ್ಲಿನ ಮೊದಲ ಅತ್ಯಾಧುನಿಕ ತಂತ್ರಜ್ಞಾನದ ಬಯೊಚಾರ್ ತಯಾರಿಕಾ ಘಟಕವಾಗಿರಲಿದೆ. ಇಂತಹ ಪರಿಸರ ಸ್ನೇಹಿ ಪರಿಹಾರಗಳನ್ನು ಅಭಿವೃದ್ಧಿಪಡಿಸುತ್ತಿರುವ ಕಂಪನಿಯ ಪ್ರಯತ್ನಗಳನ್ನು ಸಚಿವರು ಶ್ಲಾಘಿಸಿದ್ದಾರೆ. ಈ…