ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ
ಬೆಂಗಳೂರು, ಜೂ 21-ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ.ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ. ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ…