ವಸತಿ ಇಲಾಖೆ ಅಕ್ರಮ ಮರೆಮಾಚಲು ಹೆಚ್.ಕೆ. ಪಾಟೀಲ್ ಪತ್ರ ತೇಲಿ ಬಿಡಲಾಗಿದೆ!- ಹೆಚ್ ಡಿಕೆ ಆರೋಪ
ಬೆಂಗಳೂರು,ಜೂ,22-ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಆಕ್ರಮಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು,…