Girl in a jacket

Daily Archives: June 23, 2025

ಬೆಂಗಳೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ

ಬೆಂಗಳೂರು, ಜೂ,23-ಮಾನವ ಆರೋಗ್ಯದ ಪುನರುತ್ಥಾನ ಮತ್ತು ಶಾಶ್ವತ ಜೀವನ ಶೈಲಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿರುವ ಅತ್ಯಂತ ಗೌರವಾನ್ವಿತ ಸ್ವಾಯತ್ತ ಸಂಸ್ಥೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ “ಯೋಗ ಸಂಗಮ 2025”  ಆಯೋಜಿಸಿತ್ತು. ಈ  ಕಾರ್ಯಕ್ರಮವು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯ ಸಂದರ್ಭದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಕೇಂದ್ರ ಕಲ್ಪನೆಯಡಿ ಆಯೋಜಿಸಲಾಯಿತು. ಪ್ರೊ. ಸಯ್ಯದ್ ಶಾಹ್ ಆಲಂ ಅವರ ಪೂರ್ಣದೃಷ್ಟಿಯ ನಾಯಕತ್ವದಲ್ಲಿ ಈ ಕಾರ್ಯಕ್ರಮವು…

ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಕಾರ್ಬನ್‌ ಕ್ರೆಡಿಟ್ಸ್‌ ಬಳಕೆ * ಕೃಷಿ ಮಾರುಕಟ್ಟೆ ಸಚಿವರೊಂದಿಗೆ ಕೊಸ್ಯಾಂಬೊ ಅಧಿಕಾರಿ ಚರ್ಚೆ

ಬೆಂಗಳೂರು, ಜೂ,23- ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‌ಜಿ ಪ್ಲಾಂಟ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್‌ ಕ್ರೆಡಿಟ್ಸ್‌ ಅನುದಾನ ಬಳಕೆ ಬಗ್ಗೆ ದೆಹಲಿಯ ಕೊಸ್ಯಾಂಬೋ ( ಕೌನ್ಸಿಲ್‌ ಆಫ್‌ ಸ್ಟೇಟ್‌ ಅಗ್ರಿಕಲ್ಟರ್‌ ಮಾರ್ಕೆಟಿಂಗ್‌ ಡಿಪಾರ್ಟ್‌ಮೆಂಟ್‌) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್‌. ಯಾದವ್‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸೋಮವಾರ ಭೇಟಿ ಮಾಡಿ ಚರ್ಚಿಸಿದರು. ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಈಗಾಗಲೇ ಬಯೋ…

ರಾಜ್ಯ ಸರ್ಕಾರದ ವಿರುದ್ದ ಜನಾಂದೋಲನಕ್ಕೆ ಬಿಜೆಪಿ ತೀರ್ಮಾನ : ಬಸವರಾಜ ಬೊಮ್ಮಾಯಿ

ಹಾವೇರಿ,ಜೂ,23-ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ…

ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ

ರಾಯಚೂರು ಜೂ 23- ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ…

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.23-“ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.ಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು…

Girl in a jacket