ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಜೂ.25_“ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ ಜತೆ ಸಭೆ ಮಾಡುತ್ತೇನೆ. ಈ ಕಾರ್ಯಕ್ರಮ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ಸಂಬಂಧ ಮಂಡ್ಯ ಜಿಲ್ಲೆ ರೈತ ಹಾಗೂ ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ…