Girl in a jacket

Daily Archives: June 26, 2025

ಅತಿ ಶೀಘ್ರವೇ ಕರ್ನಾಟಕ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಘೋಷಣೆ: ವಿಜಯೇಂದ್ರ

26- ಬೆಂಗಳೂರು,ಜೂ,26-ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ; ನಿಮಗೂ…

4 ಹುಲಿಗಳ ಅಸಹಜ ಸಾವು ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು, ಜೂ.26- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ…

ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಬಂಧನ ಅಮಾನವೀಯ ಮುಖ್ಯಮಂತ್ರಿ ಚಂದ್ರು ಖಂಡನೆ

ಬೆಂಗಳೂರು, ಜೂ, 26-ನಿನ್ನೆ ದೇವನಹಳ್ಳಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಗಳನ್ನು ಏಕಾಏಕಿ ಬಂಧಿಸಿರುವ ಪೊಲೀಸರ ಕ್ರಮ ನಿಜಕ್ಕೂ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ನಡೆ. ಇದನ್ನು ನಾಡಿನ ಎಲ್ಲ ಜನತೆ ಖಂಡಿಸಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿ ನೆರೆದಿದ್ದ ಸಾವಿರಾರು ರೈತರುಗಳು ತಮ್ಮ ವಂಶಾನುಗತ ಕೃಷಿ ಭೂಮಿಯ ಹಕ್ಕಿಗಾಗಿ ಕಳೆದ ಸಾವಿರ ದಿವಸಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮಹಿಳೆಯರು ವೃದ್ಧರು ಎಂಬುದನ್ನು ಸಹ…

ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ: ಕೆ.ವಿ.ಪ್ರಭಾಕರ್

ತುಮಕೂರು ಜೂ 26- ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ…

ಸೆಪ್ಟಂಬರ್ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಾರೀ ಬದಲಾವಣೆ- ರಾಜಣ್ಣ

ಬೆಂಗಳೂರು, ಜೂ,26-ಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬಾರೀ ಬದಲಾವಣೆಗಳಾಗಲಿವೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ ಎಂದರು. ಶಾಸಕರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಏನು ಮಾಡುವುದು ಪವರ್ ಸೆಂಟರ್ ಗಳು ಜಾಸ್ತಿ ಆಗಿವೆ. 2013ರಿಂದ 2018ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು…

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು, ಜೂ, 26-ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಯಲಹಂಕ ತಾಲ್ಲೂಕಿನ ಪ್ರಮುಖ ಬಡಾವಣೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು. ನ್ಯಾಯಮೂರ್ತಿ ನಾಗಮೋಹನದಾಸ್ ರವರ ಏಕಸದಸ್ಯ ಆಯೋಗದ ನಿರ್ದೇಶನ ದಂತೆ ಸರ್ಕಾರವು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ ಪರಿಶಿಷ್ಟ ಜಾತಿಯ 101 ಜಾತಿಗಳ ಮೂಲಜಾತಿಗಳನ್ನು ಮೇ 6 ರಿಂದ ಸಮೀಕ್ಷೆ ನಡೆಸುತ್ತಿದ್ದು ಜೂನ್ 30ಕ್ಕೆ ಅಂತ್ಯ ಗೊಳ್ಳುತ್ತಿದ್ದು, ಸಚಿವರು ಇಂದು ಖುದ್ದಾಗಿ…

ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ

ರಾಮನಗರ,ಜೂ,26-ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ…

ಖಾನ್ ಅಕಾಡೆಮಿ ಸಹಯೋಗದೊಂದಿಗೆ ‘ಜ್ಞಾನಸೇತು’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಅನುಮೋದನೆ

ಬೆಂಗಳೂರು, ಜೂ,26- ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಆಯವ್ಯಯದ ಅನ್ವಯ ‘ಜ್ಞಾನಸೇತು’ ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವು ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಕಲಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಖಾನ್ ಅಕಾಡೆಮಿ ಸಹಯೋಗ: ಖಾನ್ ಅಕಾಡೆಮಿ ಇಂಡಿಯಾ, ಒಂದು ಲಾಭರಹಿತ ಸಂಸ್ಥೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ಶಿಕ್ಷಣವನ್ನು ಉಚಿತವಾಗಿ ಒದಗಿಸುತ್ತದೆ. ಎನ್‌ಸಿಇಆರ್‌ಟಿ ಪಠ್ಯಕ್ರಮ ಆಧಾರಿತ 1ರಿಂದ 10ನೇ…

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆ ಸಾಧ್ಯತೆ

ಬೆಂಗಳೂರು,ಜೂ,26-ರಾಜ್ಯ ಬಿಜೆಪಿಯಲ್ಲಿ ಉಂಟಾಗಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗುವ ಸಾಧ್ಯತೆಗಳು ಹೆಚ್ಚಿವೆ. ಪ್ರತಿಪಕ್ಷದ ನಾಯಕ ಆಶೋಕ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದಿಡೀರ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ರಾಜ್ಯದ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುತ್ತಿಲ್ಲ ಎನ್ನುವ ಕಾರಣಕ್ಕೆ ಈ ಇಬ್ಬರು ನಾಯಕರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತಗೆದುಕೊಂಡಿದ್ದಾರೆ ಎನ್ನಲಾಗಿದೆ. ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ…

ದಾಸೋಹ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ- ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಚಿತ್ರದುರ್ಗ, ಜೂ,26-ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾ *ಪ್ರಕಟಣೆ ಕೃಪೆಗಾಗಿ* ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ…

‘ಜಂಗಲ್ ಮಂಗಲ್’ ವಿಶಿಷ್ಟ ಚಿತ್ರ

ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ “ಜಂಗಲ್ ಮಂಗಲ್” ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ.…

ಇಂದು ತೆರೆಮೇಲೆ ‘X&Y’ಚಿತ್ರ

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಈ ವಾರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಜನಮನ್ನಣೆ ಪಡೆದಿರುವ “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ “X&Y” ನಾಲ್ಕನೇ ನಿರ್ದೇಶನದ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ “X&Y”…

Girl in a jacket