Girl in a jacket

Daily Archives: June 29, 2025

ಬಿಬಿಎಂಪಿ ಕಸದ ಲಾರಿಯಲ್ಲಿ ದೊರೆತಿದ್ದ ಶವ ಹೆಸರು ಪತ್ತೆ,ಗಂಡನೆ ಕೊಲೆ ಶಂಕೆ!

ಬೆಂಗಳೂರು,ಜೂ. ೨೯-ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಸದ ಲಾರಿಯಲ್ಲಿ ಬಿಸಾಡಿದ್ದ ಮಹಿಳೆಶವ ಈಗ ಗುರುತು ಸಿಕ್ಕಿದ್ದು ಆಕೆಯ ಹೆಸರು ಪುಷ್ಪ ಎಂದು ಗೊತ್ತಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಈಕೆಯನ್ನು ಮದುವೆಯಾಗಿದ್ದು ಪತಿಯೇ ಈಕೆಯನ್ನು ಕೊಲೆಮಾಡಿ ಇಲ್ಲಿ ಬಿಸಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಅನಾಮಿಕ ಮಹಿಳೆಯ ಶವ ಕೇಸ್‌ಗೆ ಟ್ವಿಸ್ಟ್‌ಗೆ ಸಿಕ್ಕಿದೆ. ಕೊಲೆಯಾದ ಮಹಿಳೆ…

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಕ್ ಆಯ್ಕೆ

ಬಳ್ಳಾರಿ,ಜೂ,29- ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಂಡಿದ್ದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ…

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 3 ಆರೋಪಿಗಳಿಗೆ ಶೋಧ

ಬೆಂಗಳೂರು, ಜೂ.29-ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ. ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು. ಸಚಿವರ…

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಗೆ ಜವಾಬ್ದಾರಿ ಇಲ್ವಾ.? ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ,ಜೂ,29- ಮೇಕೆದಾಟು ಯೋಜನೆ ವಿಚಾರದಲ್ಲಿ ನಿಮಗೆ ಜವಾಬ್ದಾರಿ ಇಲ್ವ, 136 ಸೀಟು ಕೊಟ್ಟು ಜನರು ಆಶೀರ್ವಾದ ಮಾಡಿಲ್ವಾ? ಪೆನ್ನು ಪೇಪರ್ ಕೊಟ್ಟಿದ್ದು ನಿಮಗೆ ಯಾಕೆ? ಲೂಟಿ, ಭ್ರಷ್ಟಚಾರ, ಕೊಳ್ಳೆ ಹೊಡೆಯೋಕೆ ಪೆನ್ನು ಪೇಪರ್ ಕೊಟ್ರಾ ನಿಮಗೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು. ಮಂಡ್ಯದ ಮದ್ದೂರಲ್ಲಿ ಮಾತನಾಡಿದ ಅವರು, ನಮ್ಮ ನೀರು ನಮ್ಮ ಹಕ್ಕು ಅಂತಾ ಹೊರಟಿದ್ರು. ಪೆನ್ನು ಪೇಪರ್ ಕೇಳಿದ್ರು, ಅಂತ ಜನ ಕೊಟ್ಟಿದ್ದಾರೆ. ಹೋಗಿ ತಮಿಳುನಾಡು ಸಿಎಂ ಜತೆ ಮಾತನಾಡಲಿ ನಾವು ನಿಮ್ಮ ಜತೆ ಬರುತ್ತೇವೆ…

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-“ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ”…

Girl in a jacket