ಕಾಂಗ್ರೆಸ್ ಅಧಿಕಾರ-ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ
ಬೆಂಗಳೂರು,ಜು,01-ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ,…