Girl in a jacket

Daily Archives: July 3, 2025

ಸಿಎಂ ಸಿದ್ದರಾಮಯ್ಯ ಬೇಟಿಯಾದ ಒಲಂಪಿಕ್ ಪದಕ ವಿಜೇತ ನೀರಜ್ ಚೋಪ್ರ

ಬೆಂಗಳೂರು, ಜು,03-ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು,ಜು,03- ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು…

ಮಾವು ಖರೀದಿ :ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ಬೆಂಗಳೂರು, ಜು 3-ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಕಾಳಜಿ, ನಿರಂತರ ಪ್ರಯತ್ನ , ಮೇಲ್ವಿಚಾರಣೆಯಿಂದಾಗಿ ತಕ್ಣಣವೇ ಹಣ ಬಿಡುಗಡೆಗೆ ಸರ್ಕಾರಿ ‌ಅದೇಶ ಹೊರ ಬಿದ್ದಿದೆ. ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆಮಾಡುವಂತೆ ರಾಜ್ಯ…

“ಕೊರಗಜ್ಜ” ಚಿತ್ರ ತಂಡದಿಂದ ಜುಲೈ 6 ಎಂ.ಎಸ್.ಸತ್ಯು ಅವರ 96 ವರ್ಷದ ಸಂಭ್ರಮಾಚರಣೆ

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು “ಕೊರಗಜ್ಜ” ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತು ಚಿತ್ರ ತಂಡ ಹೆಚ್ಚು ಸಂಭ್ರಮಿಸುತ್ತಿದೆ. ಇದಕ್ಕೆ ಕಾರಣ ಈ ಚಿತ್ರದಲ್ಲಿ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಸತ್ಯುರವರು ನೀಡಿರುವ ಕೊಡುಗೆ. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಮ್ಸ್ ಬ್ಯಾನರ್ ಅಡಿಯ ಬಹು ನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಇನ್ನೇನು ಬಿಡುಗಡೆಗೆ ಸಿದ್ಧವಾಗುತ್ತಿದೆ. ದೇಶದ ಬಲು…

ಕ್ಯಾಪಿಟಲ್ ಸಿಟಿ” ನಾಳೆ ಬಿಡುಗಡೆ

“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಚಿತ್ರ ಜನರ ಮನಸ್ಸಿಗೆ ಹತ್ತಿರವಾಗಿದೆ. ಪ್ರೇರಣ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟರಾದ ಸುಮನ್,…

ಆಗಸ್ಟ್ 22 ಕ್ಕೆ  “S\O ಮುತ್ತಣ್ಣ” ಚಿತ್ರ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು…

ಬಾಬಾನಗರದ ಬಳಿ ಹೊಸ ಕೆರೆ ನಿರ್ಮಾಣದ ಉದ್ದೇಶ: 550 ಕೋಟಿ ರೂ. ಅನುದಾನಕ್ಕೆ ಮನವಿ

ಬೆಂಗಳೂರು,ಜು,03- ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಜಲಸಂಪನ್ಮೂಲ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳನ್ನು ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಗುರುವಾರ…

ರಾಜ್ಯಾದ್ಯಂತ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಚಾಲನೆ

ಬೆಂಗಳೂರು, ಜು,03-ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ…

ಉಡುಪಿ ಮೂಲಕ ವಿವಿಧ ದೇಶಗಳಿಗೆ ಡ್ರಗ್ಸ್ ಮಾರುತ್ತಿದ್ದ ಜಾಲ ಪತ್ತೆ,10 ಮಂದಿ ಬಂಧನ

ನವದೆಹಲಿ, ಜು,03-ಕರ್ನಾಟಕದ ಉಡುಪಿ ಮೂಲಕ ಹತ್ತಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ದೆಹಲಿ ಪೊಲೀಸರು ಬೇದಿಸಿದ್ದು ಈ ಸಂಬಂಧ 10 ಮಂದಿಯನ್ನು ಬಂದಿಸಿದ್ದಾರೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್…

Girl in a jacket