ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ ಬಿ ಪಾಟೀಲ
ಬೆಂಗಳೂರು,ಜು,08-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ *ಕಲಾಲೋಕ* ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಮಂಗಳವಾರ ಇಲ್ಲಿ ಸರಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ…