ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ
ನವದೆಹಲಿ,ಜು,09- ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದೆಹಲಿ…