ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು
ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…