Girl in a jacket

Daily Archives: July 21, 2025

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ)ಜು, 21-ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ…

ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ.ಎಂ.ಕೆ.ರಮೇಶ್ ನೇಮಕ

ಬೆಂಗಳೂರು, ಜು, 21-ಭಾರತ ಸರ್ಕಾರವು 2025 ನೇ ಜುಲೈ 11 ರಂದು ಸಚಿವ ಸಂಪುಟದ ನೇಮಕಾತಿ ಸಮಿತಿಯ ಮೂಲಕ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಎಂ.ಕೆ. ರಮೇಶ್ ಅವರನ್ನು ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಡಿಯಲ್ಲಿರುವ ನಾಲ್ಕು ಸ್ವಾಯತ್ತ ಸಂಸ್ಥೆಗಳಲ್ಲಿ ಒಂದಾದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಿದೆ. ಇದಕ್ಕೂ ಮೊದಲು ಇವರು ಎನ್.ಎಂ.ಸಿ. ಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿಯೂ…

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು, ಜುಲೈ 21-ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ…

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.21- “ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ…

ಧರ್ಮಸ್ಥಳ ಪ್ರಕರಣ-ಎಸ್‌ಐಟಿ ತಂಡದ ಇಬ್ಬರ ಅಧಿಕಾರಿಗಳು ಹೊರಕ್ಕೆ?

ಬೆಂಗಳೂರು,ಜೂ,೨೧-ಧರ್ಮಸ್ಥಳದ ಅರಣ್ಯಪ್ರದೇಶದಲ್ಲಿ ನೂರಾರು ಶವಗಳನ್ನು ಊಳಲಾಗಿದೆಎಂಬ ಪ್ರಕರಣಕ್ಕೆಸಂಭಂಧಿಸಿದಂತೆ ರಾಜ್ಯ ಸರ್ಕಾರ ಅದರ ತನಿಖೆಗೆ ಎಸ್‌ಐಟಿಯನ್ನು ನೇಮಿಸಿತ್ತು ಆದರೆ ಆ ತನಿಖಾ ತಂಡದ ಐವರು ಅಧಿಕಾರಿಗಳಲ್ಲಿ ಇಬ್ಬರು ಅಧಿಕಾರಿಗಳು ತನಿಖಾ ತಂಡದಿಂದ ಹೊರಬರಲು ಸಿದ್ದತೆ ನಡೆಸಿದ್ದಾರೆ ಎನ್ನುವ ಮಾಹಿತಿ ಇದೆ. ಧರ್ಮಸ್ಥಳದ ಪ್ರಕರಣ ಈಗ ರಾಜ್ಯದಲ್ಲಿ ದೊಡ್ಡ ಸುದ್ದಿಮಾಡುತ್ತಿದೆ ಹಲವಾರು ಮಂದಿ ಇದನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಎನ್ನುವ ಆಗ್ರಹಗಳು ಒತ್ತಡಗಳು ಈ ಒತ್ತಡಕ್ಕೆ ಮಣಿದು ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಐದು ಐಪಿಎಸ್ ಅಧಿಕಾರಿಗಳನ್ನು…

Girl in a jacket