ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ
ದಾವಣಗೆರೆ,ಜು,21- ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ದಾವಣಗೆರೆಯ ಶ್ರೀ ಮದ್ ಅಭಿನವ ರೇಣುಕ ಮಂದಿರದಲ್ಲಿ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ದಿವ್ಯಸಾನಿಧ್ಯದಲ್ಲಿ ಏರ್ಪಡಿಸಲಾದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ನಾವೆಲ್ಲ ಬಹಳ ಸಂಕೀರ್ಣ ಕಾಲದಲ್ಲಿ ಇಲ್ಲಿ ಸೆರಿದ್ದೇವೆ…